ಕನ್ನಡ ಜಾಗೃತಿ ಪತ್ರಿಕೆ ಮಾರ್ಚ್ - ಡಿಸೆಂಬರ್ 2015 / ಆಡಳಿತ ಪದಕೋಶ/ ವೃತ್ತಿ ಶಿಕ್ಷಣದಲ್ಲಿ ಕಡ್ಡಾಯವಾಗಿ ಕನ್ನಡವನ್ನು ಬೋಧಿಸುವ ಕುರಿತು ಸಮಿತಿಯ ವರದಿ

ಭಾಷಾವಾರು ಪ್ರಾಂತ್ಯಗಳ ರಚನೆಯ ಹಲವು ಉದ್ದೇಶಗಳಲ್ಲಿ ಆಯಾ ಪ್ರದೇಶದಲ್ಲಿ ಪ್ರಧಾನವಾಗಿ ಬಳಕೆಯಲ್ಲಿರುವ ಭಾಷೆಯಲ್ಲಿ ಆಡಳಿತವನ್ನು ನಡೆಸುವುದು ಒಂದಾಗಿರುತ್ತದೆ. ಕರ್ನಾಟಕದ ಮಟ್ಟಿಗೆ ಹೇಳುವುದಾದರೆ ಈ ವಿಚಾರದಲ್ಲಿ ಭಾಷಾವಾರು ಪ್ರಾಂತ್ಯ ರಚನೆಯ ಹಿಂದೆ ಇದ್ದ ಸ್ಥಿತಿಯೇ ಆನಂತರದ ವರ್ಷಗಳಲ್ಲೂ ಮುಂದುವರಿಯಿತು. ಆಡಳಿತ ಎಂದರೆ ಇಂಗ್ಲೀಷ್ ಭಾಷೆಯಲ್ಲಿನ  ಆಡಳಿತವೇ ಎಂಬ ಸ್ಥಿತಿ ನಿರ್ಮಾಣವಾಗಿತ್ತು. ಇದನ್ನು ತಪ್ಪಿಸುವ ಪ್ರಯತ್ನವಾಗಿ ಸರ್ಕಾರವು ಕರ್ನಾಟಕ ರಾಜಭಾಷಾ ಅಧಿನಿಯಮ 1963 ಎಂಬ ಒಂದು ಕಾಯಿದೆಯನ್ನು ಜಾರಿಗೊಳಿಸಿ ಕರ್ನಾಟಕ ರಾಜ್ಯದಲ್ಲಿ ಕನ್ನಡವು ರಾಜ್ಯದ ಅಧಿಕೃತ ಆಡಳಿತ ಭಾಷೆಯೆಂದು ಘೋಷಿಸಿತು.